ಯೆಹೋಶುವ 5:12 - ಪರಿಶುದ್ದ ಬೈಬಲ್12 ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ನಾಡಿನ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ಮತ್ತೆ ಸಿಕ್ಕಲೇ ಇಲ್ಲ. ಇಸ್ರಯೇಲರು ಆ ವರ್ಷವೆಲ್ಲ ಕಾನಾನ್ ನಾಡಿನ ಉತ್ಪನ್ನವನ್ನೇ ಅನುಭವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿವಸವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರಿಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನು ಅನುಭವಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಆ ದೇಶದ ಧಾನ್ಯವನ್ನು ತಿಂದ ಮರುದಿವಸದಲ್ಲೇ ಮನ್ನವು ನಿಂತುಹೋಯಿತು. ಇಸ್ರಾಯೇಲರಿಗೆ ಮನ್ನ ಮತ್ತೆ ಸಿಕ್ಕಲಿಲ್ಲ. ಅವರು ಆ ವರುಷದಲ್ಲಿ ಕಾನಾನ್ ದೇಶದ ಫಲವನ್ನು ತಿಂದರು. ಅಧ್ಯಾಯವನ್ನು ನೋಡಿ |