Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:14 - ಪರಿಶುದ್ದ ಬೈಬಲ್‌

14 ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಮನುಷ್ಯನು - ನಾನು ಅಂಥವನಲ್ಲ; ಯೆಹೋವನ ಸೇನಾಪತಿಯು; ಈಗಲೇ ಬಂದಿದ್ದೇನೆ ಎಂದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ಸ್ವಾವಿುಯವರು ತಮ್ಮ ಸೇವಕನಿಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:14
35 ತಿಳಿವುಗಳ ಹೋಲಿಕೆ  

ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”


ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ,


ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ‘ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ,


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.


ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


‘ಪ್ರಭು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ), ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ.


ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.


ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.


ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.


ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ!


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.


ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.


ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.


ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.


ತರುವಾಯ ಯೆಹೋವನು ಯೆಹೋಶುವನಿಗೆ,


ನಾನು ಕೇವಲ ನಿನ್ನ ಸೇವಕನು. ನೀನು ನನ್ನ ಮೇಲೆ ಬಹಳ ದಯೆ ತೋರಿಸಿರುವೆ. ನನಗೆ ಮಾತ್ರವಲ್ಲದೆ ನೀನು ನನ್ನ ಮುಂದಿನ ಸಂತಾನದ ಬಗ್ಗೆಯೂ ಇದೇ ರೀತಿಯ ದಯಾಪರವಾದ ಮಾತುಗಳನ್ನು ಆಡಿರುವೆ. ನನ್ನ ಒಡೆಯನಾದ ಯೆಹೋವನೇ, ನರಪ್ರಾಣಿಯಾದ ನನ್ನೊಂದಿಗೆ ಇಂಥ ಮಹತ್ತಾದ ಕಾರ್ಯ ಮಾಡಬಹುದೇ?


ನಾನು ನಿನಗೆ ಇನ್ನೇನು ಹೇಳಲಿ? ನಿನ್ನ ಜೊತೆ ಹೇಗೆ ಮಾತನಾಡುತ್ತಲೇ ಇರಲಿ? ನನ್ನ ಒಡೆಯನಾದ ಯೆಹೋವನೇ, ನಾನು ನಿನ್ನ ಸೇವಕನೆಂಬುದು ನಿನಗೆ ತಿಳಿದಿದೆ.


ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.


ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು