Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:15 - ಪರಿಶುದ್ದ ಬೈಬಲ್‌

15 ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ಸೇನಾಪತಿಯು - ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು ಎಂದು ಯೆಹೋಶುವನಿಗೆ ಹೇಳಿದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಯೆಹೋವ ದೇವರ ಸೈನ್ಯದ ಅಧಿಪತಿಯು ಯೆಹೋಶುವನಿಗೆ, “ನಿನ್ನ ಕೆರಗಳನ್ನು ನಿನ್ನ ಕಾಲುಗಳಿಂದ ತೆಗೆದಿಡು. ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು,” ಎಂದನು. ಹಾಗೆಯೇ ಯೆಹೋಶುವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:15
4 ತಿಳಿವುಗಳ ಹೋಲಿಕೆ  

ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.


ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು.


ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು