Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:3 - ಪರಿಶುದ್ದ ಬೈಬಲ್‌

3 ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್‌ನಲ್ಲಿ ಸುನ್ನತಿಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಯೇಲರಿಗೆ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್ ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:3
5 ತಿಳಿವುಗಳ ಹೋಲಿಕೆ  

ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.


ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು ಮಾಡಿಸು” ಎಂದು ಹೇಳಿದನು.


ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು