ಯೆಹೋಶುವ 6:1 - ಪರಿಶುದ್ದ ಬೈಬಲ್1 ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೆರಿಕೋದ ಜನರು ಇಸ್ರಯೇಲರಿಗೆ ಹೆದರಿ ತಮ್ಮ ನಗರದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದರು. ಯಾರೂ ಹೊರಗೆ ಬರುತ್ತಿರಲಿಲ್ಲ, ಒಳಗೆ ಹೋಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 (ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು. ಅಧ್ಯಾಯವನ್ನು ನೋಡಿ |
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”