ಯೆಹೋಶುವ 6:10 - ಪರಿಶುದ್ದ ಬೈಬಲ್10 ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋಶುವನು ಜನರಿಗೆ “ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಆರ್ಭಟಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಧ್ವನಿ ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತೂ ಬರಕೂಡದು. ಆರ್ಭಟಿಸಿರೆಂದು ನಾನು ಹೇಳುವಾಗ ಮಾತ್ರ ನೀವು ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋಶುವನು ಜನರಿಗೆ - ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ; ಆರ್ಭಟಿಸಿರೆಂದು ನಾನು ಹೇಳುವ ದಿವಸದಲ್ಲಿ ಮಾತ್ರ ಆರ್ಭಟಿಸಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |