ಯೆಹೋಶುವ 6:13 - ಪರಿಶುದ್ದ ಬೈಬಲ್13 ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ನಡೆದರು. ಆಯಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ಪಟ್ಟಣದ ಸುತ್ತಲೂ ನಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು; ಹಿಂದಣ ದಳವು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು. ಅಧ್ಯಾಯವನ್ನು ನೋಡಿ |