Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:17 - ಪರಿಶುದ್ದ ಬೈಬಲ್‌

17 ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:17
26 ತಿಳಿವುಗಳ ಹೋಲಿಕೆ  

ನೀವು ಹಿತ್ತಿಯರನ್ನು, ಅಮೋರಿಯರನ್ನು, ಕಾನಾನ್ಯರನ್ನು, ಪೆರಿಜ್ಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ಸಂಪೂರ್ಣವಾಗಿ ಹತ್ಯೆ ಮಾಡಬೇಕು. ಇದು ನಿಮ್ಮ ದೇವರಾದ ಯೆಹೋವನ ಅಪ್ಪಣೆ.


ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.


“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”


ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.


ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.


ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು. ರಾಜಭಟರು ದಾರಿಯಲ್ಲೆಲ್ಲಾ ಹುಡುಕಾಡಿ ಕಾಣದೆ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.


ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು