ಯೆಹೋಶುವ 6:21 - ಪರಿಶುದ್ದ ಬೈಬಲ್21 ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಪಟ್ಟಣದಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಹುಡುಗರನ್ನೂ ಮುದುಕರನ್ನೂ ದನಕುರಿಕತ್ತೆಗಳನ್ನೂ ನಿಶ್ಶೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು. ಅಧ್ಯಾಯವನ್ನು ನೋಡಿ |
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.