ಯೆಹೋಶುವ 6:22 - ಪರಿಶುದ್ದ ಬೈಬಲ್22 ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೆಹೋಶುವನು ಆ ನಾಡಿನಲ್ಲಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನು ಹೊರಗೆ ತೆಗೆದುಕೊಂಡು ಬನ್ನಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಮನುಷ್ಯರಿಗೆ - ನೀವು ಆ ಸೂಳೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿ |
(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.