26 ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.
26 ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.
26 ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು.
26 ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.
26 ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”
ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.
ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.
ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.
ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.