ಯೆಹೋಶುವ 6:27 - ಪರಿಶುದ್ದ ಬೈಬಲ್27 ಯೆಹೋವನು ಯೆಹೋಶುವನ ಸಂಗಡ ಇದ್ದನು. ಯೆಹೋಶುವನು ದೇಶದಲ್ಲೆಲ್ಲಾ ಸುಪ್ರಸಿದ್ಧನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಯೆಹೋಶುವನ ಸಂಗಡ ಇದ್ದದರಿಂದ ಅವನು ದೇಶದಲ್ಲೆಲ್ಲಾ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.