Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:7 - ಪರಿಶುದ್ದ ಬೈಬಲ್‌

7 ಬಳಿಕ ಯೆಹೋಶುವನು ಜನರಿಗೆ, “ಈಗ ನಗರದ ಸುತ್ತ ಪ್ರದಕ್ಷಿಣೆ ಹಾಕಿರಿ. ಆಯುಧಗಳನ್ನು ಹಿಡಿದುಕೊಂಡು ಯೋಧರು ಯೆಹೋವನ ಪವಿತ್ರಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತು ಅವನು ಜನರಿಗೆ “ನೀವು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂತೆಯೆ ಜನರಿಗೆ, “ನೀವು ಮುಂದೆ ಹೋಗಿ ನಗರವನ್ನು ಸುತ್ತುವರೆಯಿರಿ. ಯುದ್ಧಸನ್ನದ್ಧರೆಲ್ಲರೂ ಸರ್ವೇಶ್ವರನ ಮಂಜೂಷದ ಮುಂದೆ ಹೋಗಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ಅವನು ಜನರಿಗೆ - ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜನರಿಗೆ, “ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ದರು ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:7
5 ತಿಳಿವುಗಳ ಹೋಲಿಕೆ  

ಯುದ್ಧಸನ್ನದ್ಧರಾದ ಸುಮಾರು ನಲವತ್ತು ಸಾವಿರ ಭಟರು ಯೆಹೋವನ ಮುಂದೆ ಜೆರಿಕೊವಿನ ಬಯಲಿನ ಕಡೆಗೆ ಹೋದರು.


ಪ್ರತಿ ನಿತ್ಯ ಒಂದು ಸಲ ನಿನ್ನ ಸೇನೆಯೊಂದಿಗೆ ನಗರದ ಸುತ್ತಲೂ ಸುತ್ತಬೇಕು. ಹೀಗೆ ಆರು ದಿನಗಳವರೆಗೆ ಸುತ್ತಬೇಕು.


ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.


ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು