8 ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.
8 ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು.
ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟುವುದಾದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವರಾಗಿರುವಿರಿ.