ಯೆಹೋಶುವ 7:1 - ಪರಿಶುದ್ದ ಬೈಬಲ್1 ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದರಿಂದ ಇಸ್ರಾಯೇಲ್ಯರೆಲ್ಲರೂ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು. ಅಧ್ಯಾಯವನ್ನು ನೋಡಿ |
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.