Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:13 - ಪರಿಶುದ್ದ ಬೈಬಲ್‌

13 “ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:13
13 ತಿಳಿವುಗಳ ಹೋಲಿಕೆ  

“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.


ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.


ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.


ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.


ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪಮಾಡುತ್ತಿದ್ದೀರಿ.


ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು