Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:14 - ಪರಿಶುದ್ದ ಬೈಬಲ್‌

14 “‘ನಾಳೆ ಬೆಳಿಗ್ಗೆ ನೀವೆಲ್ಲರು ಯೆಹೋವನ ಮುಂದೆ ಬಂದು ನಿಲ್ಲಬೇಕು. ಎಲ್ಲಾ ಕುಲಗಳು ಯೆಹೋವನ ಮುಂದೆ ಬಂದು ನಿಲ್ಲಬೇಕು. ಯೆಹೋವನು ಒಂದು ಕುಲವನ್ನು ಸೂಚಿಸುತ್ತಾನೆ. ಆಗ ಆ ಕುಲ ಮಾತ್ರ ಮುಂದೆ ನಿಲ್ಲಬೇಕು. ಆಗ ಯೆಹೋವನು ಒಂದು ಗೋತ್ರವನ್ನು ಸೂಚಿಸುತ್ತಾನೆ. ಆಗ ಆ ಗೋತ್ರದವರು ಮಾತ್ರ ಯೆಹೋವನ ಮುಂದೆ ನಿಲ್ಲಬೇಕು. ಆಗ ಯೆಹೋವನು ಆ ಗೋತ್ರದ ಪ್ರತಿಯೊಂದು ಕುಟುಂಬವನ್ನು ನೋಡಿ, ಒಂದು ಕುಟುಂಬವನ್ನು ಸೂಚಿಸುತ್ತಾನೆ. ಬಳಿಕ ಯೆಹೋವನು ಆ ಕುಟುಂಬದ ಪ್ರತಿಯೊಬ್ಬ ಮನುಷ್ಯನನ್ನು ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಸೂಚಿಸುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿ ನನ್ನ ಬಳಿಗೆ ಬರಬೇಕು. ಯಾವ ಕುಟುಂಬನ್ನು ಸೂಚಿಸುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿ ನನ್ನ ಬಳಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿ. ಸರ್ವೇಶ್ವರ ಯಾವ ಕುಲವನ್ನು ಸೂಚಿಸುತ್ತಾರೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾರೋ ಆ ಗೋತ್ರವು ಕುಟುಂಬ ಕುಟುಂಬವಾಗಿ, ಯಾವ ಕುಟುಂಬವನ್ನು ಸೂಚಿಸುತ್ತಾರೋ ಆ ಕುಟುಂಬದವರು ಒಬ್ಬೊಬ್ಬರಾಗಿ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾಳೆ ಬೆಳಿಗ್ಗೆ ನೀವು ಕುಲಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಹಿಡಿಯುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿಯೂ, ಯಾವ ಗೋತ್ರವನ್ನು ಹಿಡಿಯುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿಯೂ, ಯಾವ ಕುಟುಂಬವನ್ನು ಹಿಡಿಯುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿಯೂ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:14
6 ತಿಳಿವುಗಳ ಹೋಲಿಕೆ  

ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು