ಯೆಹೋಶುವ 7:15 - ಪರಿಶುದ್ದ ಬೈಬಲ್15 ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ’” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲ್ಯರಲ್ಲಿ ಬುದ್ಧಿಹೀನಕಾರ್ಯವನ್ನು ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿಸಹಿತವಾಗಿ ಸುಡಲ್ಪಡಬೇಕು ಎಂದು ಹೇಳು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.” ಅಧ್ಯಾಯವನ್ನು ನೋಡಿ |
ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.