Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:17 - ಪರಿಶುದ್ದ ಬೈಬಲ್‌

17 ಆದ್ದರಿಂದ ಯೆಹೂದ ಕುಲದ ಎಲ್ಲ ಗೋತ್ರಗಳು ಯೆಹೋವನ ಮುಂದೆ ಬಂದು ನಿಂತವು. ಯೆಹೋವನು ಜೆರಹನ ಗೋತ್ರವನ್ನು ಸೂಚಿಸಿದನು. ಆಗ ಜೆರಹನ ಗೋತ್ರದ ಎಲ್ಲ ಕುಟುಂಬಗಳು ಯೆಹೋವನ ಎದುರಿಗೆ ಬಂದು ನಿಂತವು. ಆಗ ಜಬ್ದೀಯ ಕುಟುಂಬವನ್ನು ಸೂಚಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಸಿಕ್ಕಿಕೊಂಡಿತು. ಅ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರ ಸಿಕ್ಕಿಕೊಂಡಿತು. ಆ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬ ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಆ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಯೆಹೂದ ಕುಟುಂಬವನ್ನು ಕರೆದಾಗ, ಜೆರಹನ ಗೋತ್ರ ಸಿಕ್ಕಿಕೊಂಡಿತು. ಜೆರಹನ ಗೋತ್ರವನ್ನು ಕರೆದಾಗ ಜಿಮ್ರಿಯು ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:17
6 ತಿಳಿವುಗಳ ಹೋಲಿಕೆ  

ಆ ಬಳಿಕ ಮತ್ತೊಂದು ಮಗುವು ಹೊರಬಂದಿತು. ಆ ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು.


ಜೆರಹನ ಕುಟುಂಬದವರಾದ ಜೆರಹಿಯರು; ಸೌಲನ ಕುಟುಂಬದವರಾದ ಸೌಲ್ಯರು.


ಮಾರನೆಯ ದಿನ, ಬೆಳಿಗ್ಗೆ ಯೆಹೋಶುವನು ಇಸ್ರೇಲಿನ ಎಲ್ಲ ಜನರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದನು. ಎಲ್ಲ ಕುಲಗಳು ಯೆಹೋವನ ಮುಂದೆ ನಿಂತುಕೊಂಡವು. ಯೆಹೋವನು ಯೆಹೂದ ಕುಲವನ್ನು ಸೂಚಿಸಿದನು.


ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು