Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:19 - ಪರಿಶುದ್ದ ಬೈಬಲ್‌

19 ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:19
25 ತಿಳಿವುಗಳ ಹೋಲಿಕೆ  

ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.


ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.


ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.


ಸೌಲನು ಯೋನಾತಾನನಿಗೆ, “ನೀನು ಏನು ಮಾಡಿದೆಯೆಂಬುದನ್ನು ನನಗೆ ತಿಳಿಸು” ಎಂದು ಕೇಳಿದನು. ಯೋನಾತಾನನು ಸೌಲನಿಗೆ, “ನಾನು ನನ್ನ ಕೋಲಿನ ತುದಿಯಿಂದ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದೆನು. ನಾನು ಅದಕ್ಕಾಗಿ ಸಾಯಬೇಕೇ?” ಎಂದು ಕೇಳಿದನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.


ಒಬ್ಬ ವ್ಯಕ್ತಿಯ ಕೋಪವು ದೇವರು ಅಪೇಕ್ಷಿಸಿದಂತೆ ಯೋಗ್ಯ ಜೀವನವನ್ನು ನಡೆಸಲು ಅವನಿಗೆ ಸಹಾಯಕವಾಗುವುದಿಲ್ಲ.


ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ಹೌದು, ನಾವು ನಮ್ಮ ಹೃದಯಗಳಲ್ಲಿ ನಂಬುವುದರ ಮೂಲಕ ನೀತಿವಂತರಾಗುತ್ತೇವೆ. “ನಂಬುತ್ತೇವೆ” ಎಂದು ಬಾಯಾರೆ ಹೇಳುವುದರ ಮೂಲಕ ರಕ್ಷಣೆ ಹೊಂದುತ್ತೇವೆ.


ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?” ಎಂದು ಕೇಳಿದನು.


ಬಂಗಾರವು ಯಾವ ರೀತಿಯಲ್ಲಿ ಅಪರೂಪವಾಗಿ ದೊರಕುವದೋ, ಅದೇ ಪ್ರಕಾರ ದೇಶದಲ್ಲಿ ಬಹು ಸ್ವಲ್ಪವೇ ಜನರು ಉಳಿಯುವದರಿಂದ ಅವರು ನೋಡಸಿಗುವದೇ ಅಪರೂಪ. ಅಂಥವರು ಚೊಕ್ಕಬಂಗಾರಕ್ಕಿಂತಲೂ ಬೆಲೆಬಾಳುವರು.


ನಾನು ಪಾಪಮಾಡಿದ್ದೇನೆಂದು ನನಗೆ ಗೊತ್ತಿದೆ. ಆ ಪಾಪಗಳು ನನ್ನ ಮುಂದೆಯೇ ಇವೆ.


ಆಗ ಆಕಾನನು, “ಇದು ಸತ್ಯ. ನಾನು ಇಸ್ರೇಲಿನ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡಿದ್ದೇನೆ.


ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು