ಯೆಹೋಶುವ 7:2 - ಪರಿಶುದ್ದ ಬೈಬಲ್2 ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು “ಆಯಿ” ಎಂಬ ಪಟ್ಟಣಕ್ಕೆ ಕಳುಹಿಸಿದನು. “ಆಯಿ” ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು. ಅಧ್ಯಾಯವನ್ನು ನೋಡಿ |
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”
ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.
“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.