Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:20 - ಪರಿಶುದ್ದ ಬೈಬಲ್‌

20 ಆಗ ಆಕಾನನು, “ಇದು ಸತ್ಯ. ನಾನು ಇಸ್ರೇಲಿನ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20-21 ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನಿಗೆ ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದು ನಿಜ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20-21 ಆಕಾನನು ಯೆಹೋಶುವನಿಗೆ - ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಆಶೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹುಗಿದಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ. ನಾನು ನಿಜವಾಗಿ ಇಂಥದನ್ನು ಮಾಡಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:20
13 ತಿಳಿವುಗಳ ಹೋಲಿಕೆ  

ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ?


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.


ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


ಫರೋಹನು ಕೂಡಲೇ ಮೋಶೆ ಆರೋನರನ್ನು ಕರೆಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ.


ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.


ಅದನ್ನು ಬಹಳ ಹಣಕ್ಕೆ ಮಾರಿ ಬಡ ಜನರಿಗೆ ಕೊಡಬಹುದಾಗಿತ್ತಲ್ಲಾ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು