Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:21 - ಪರಿಶುದ್ದ ಬೈಬಲ್‌

21 ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:21
35 ತಿಳಿವುಗಳ ಹೋಲಿಕೆ  

ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ.


ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು.


“ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


“ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ.


“ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”


ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.


ಆಗ ಆಕಾನನು, “ಇದು ಸತ್ಯ. ನಾನು ಇಸ್ರೇಲಿನ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡಿದ್ದೇನೆ.


ಆಗ ಯೆಹೋಶುವನು ಕೆಲವರನ್ನು ಗುಡಾರಕ್ಕೆ ಕಳುಹಿಸಿದನು. ಅವರು ಗುಡಾರಕ್ಕೆ ಓಡಿಹೋಗಿ ಹುಗಿದಿಟ್ಟಿದ್ದ ಆ ವಸ್ತುಗಳನ್ನು ಕಂಡರು. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇತ್ತು.


ಈ ಕುಷ್ಠರೋಗಿಗಳು ಪಾಳೆಯವು ಆರಂಭವಾಗಿದ್ದಲ್ಲಿಗೆ ಬಂದು, ಒಂದು ಗುಡಾರದೊಳಕ್ಕೆ ಹೋದರು. ಅವರು ಅಲ್ಲಿ ತಿಂದರು ಮತ್ತು ಕುಡಿದರು. ನಂತರ ಈ ನಾಲ್ವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಪಾಳೆಯದಿಂದ ಹೊರಗೆ ತೆಗೆದುಕೊಂಡು ಹೋದರು. ಅವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಅಡಗಿಸಿಟ್ಟರು. ನಂತರ ಅವರು ಹಿಂದಿರುಗಿ ಬಂದು, ಮತ್ತೊಂದು ಗುಡಾರವನ್ನು ಪ್ರವೇಶಿಸಿದರು. ಆ ಗುಡಾರದಿಂದಲೂ ಅವರು ವಸ್ತುಗಳನ್ನು ಕೊಂಡೊಯ್ದರು. ಅವರು ಹೊರಗೆ ಹೋಗಿ ಅವುಗಳನ್ನು ಅಡಗಿಸಿಟ್ಟರು.


ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.


ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು