ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.
ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.