Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:24 - ಪರಿಶುದ್ದ ಬೈಬಲ್‌

24 ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು “ಆಕೋರ್” ಕಣಿವೆಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿಯನ್ನು, ಅವನ ಗಂಡುಹೆಣ್ಣು ಮಕ್ಕಳನ್ನು, ದನ, ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರವನ್ನು ಆಕೋರ್ ಎಂಬ ಕಣಿವೆಗೆ ಒಯ್ಯಲಾಯಿತು. ಯೆಹೋಶುವನೂ ಇಸ್ರಯೇಲರೆಲ್ಲರೂ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಯೆಹೋಶುವನೂ ಎಲ್ಲಾ ಇಸ್ರಾಯೇಲ್ಯರೂ ಜೆರಹನ ಮಗನಾದ ಆಕಾನನನ್ನು ಆ ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡು ಹೆಣ್ಣು ಮಕ್ಕಳು, ದನಕರುಗಳು, ಕತ್ತೆಗಳು, ಆಡುಕುರಿಗಳು, ಗುಡಾರವು ಈ ಎಲ್ಲವುಗಳ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೋಶುವನೂ ಅವನೊಂದಿಗೆ ಇಸ್ರಾಯೇಲರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಪುತ್ರಪುತ್ರಿಯರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ಕಣಿವೆಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:24
18 ತಿಳಿವುಗಳ ಹೋಲಿಕೆ  

ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.


ಅಲ್ಲಿಂದ ಅದು ಆಕೋರಿನ ಕಣಿವೆಯಿಂದ ಹಾದು ದೆಬೀರಕ್ಕೆ ಮುಟ್ಟಿ ಅಲ್ಲಿ ಉತ್ತರಕ್ಕೆ ತಿರುಗಿ ಗಿಲ್ಗಾಲಕ್ಕೆ ಮುಟ್ಟಿತ್ತು. ಅದು ಮೀಮಿನ ಬೆಟ್ಟದಿಂದ ಹೋಗುವ ದಾರಿಯ ಎದುರಿಗೆ ಗಿಲ್ಗಾಲ್ ಇದೆ. ಅದು ಹಳ್ಳದ ದಕ್ಷಿಣ ಭಾಗದಲ್ಲಿದೆ. ಈ ಸೀಮೆಯು ಏನ್‌ಷೆಮೆಷ್ ನದಿಯವರೆಗೆ ಹೋಗಿ ಏನ್‌ರೋಗೆಲ್‌ನಲ್ಲಿ ಕೊನೆಗೊಳ್ಳುತ್ತದೆ.


ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ.


ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.


ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಜನರು ಆ ವಸ್ತುಗಳನ್ನು ಗುಡಾರದ ಹೊರಗೆ ತೆಗೆದುಕೊಂಡು ಬಂದು ಯೆಹೋಶುವನ ಮತ್ತು ಎಲ್ಲಾ ಇಸ್ರೇಲರ ಬಳಿಗೆ ಬಂದರು. ಅವರು ಯೆಹೋವನ ಮುಂದೆ ಆ ವಸ್ತುಗಳನ್ನೆಲ್ಲಾ ನೆಲದ ಮೇಲೆ ಹಾಕಿದರು.


“‘ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು’” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು