ಯೆಹೋಶುವ 8:11 - ಪರಿಶುದ್ದ ಬೈಬಲ್11 ಅವನ ಜೊತೆಗಿದ್ದ ಎಲ್ಲ ಸೈನಿಕರು “ಆಯಿ”ಯ ಕಡೆಗೆ ಹೋದರು. ಅವರು ನಗರದ ಮುಂದುಗಡೆ ನಿಂತರು. ಸೈನ್ಯವು ನಗರದ ಉತ್ತರ ದಿಕ್ಕಿನಲ್ಲಿಳಿದುಕೊಂಡಿತು. ಈ ಸೈನ್ಯ ಮತ್ತು “ಆಯಿ” ಪಟ್ಟಣದ ನಡುವೆ ಒಂದು ಕಣಿವೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನೊಂದಿಗಿದ್ದ ಯೋಧರೆಲ್ಲರು ನಗರದ ಸಮೀಪಕ್ಕೆ ಏರಿಬಂದು ಅದರ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ಕಣಿವೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನ ಸಂಗಡ ಇದ್ದ ಸೈನಿಕರೆಲ್ಲಾ ನಡೆದು ಪಟ್ಟಣದ ಸಮೀಪವಾಗಿ ಬಂದು ಸೇರಿ, ಆಯಿ ಎಂಬ ಪಟ್ಟಣದ ಉತ್ತರ ದಿಕ್ಕಿನಲ್ಲಿ ಪಾಳೆಯಲ್ಲಿ ಇಳಿದುಕೊಂಡರು. ಆದರೆ ಆಯಿ ಎಂಬ ಪಟ್ಟಣಕ್ಕೂ ಅವರಿಗೂ ಮಧ್ಯದಲ್ಲಿ ಒಂದು ಕಣಿವೆ ಇತ್ತು. ಅಧ್ಯಾಯವನ್ನು ನೋಡಿ |