Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:13 - ಪರಿಶುದ್ದ ಬೈಬಲ್‌

13 ಯೆಹೋಶುವನು ತನ್ನ ಜನರನ್ನು ಯುದ್ಧಕ್ಕೆ ಸಿದ್ಧಗೊಳಿಸಿದ್ದನು. ಮುಖ್ಯ ಪಾಳೆಯವು ಪಟ್ಟಣದ ಉತ್ತರ ದಿಕ್ಕಿನಲ್ಲಿತ್ತು. ಉಳಿದ ಜನರು ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಆ ರಾತ್ರಿ ಯೆಹೋಶುವನು ಕಣಿವೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಗರದ ಉತ್ತರದಲ್ಲಿದ್ದ ಸಮಸ್ತ ಸೈನ್ಯವನ್ನು, ನಗರದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನು ಕ್ರಮಪಡಿಸಿದ ನಂತರ ಅವನು ಆ ರಾತ್ರಿಯನ್ನು ಕಣಿವೆಯಲ್ಲಿ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಟ್ಟಣಕ್ಕೆ ಉತ್ತರದಲ್ಲಿರುವ ಸಕಲ ಸೈನ್ಯದ ಜನರನ್ನೂ, ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಗಾರರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಯ ಮಧ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:13
3 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು.


“ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.


ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವುದಕ್ಕಾಗಿ ತ್ವರೆಮಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು