Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:20 - ಪರಿಶುದ್ದ ಬೈಬಲ್‌

20 “ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಯಿಯ ಜನರು ಹಿಂದಿರುಗಿ ನೋಡಿದಾಗ ನಗರದ ಹೊಗೆ ಆಕಾಶಕ್ಕೆ ಏರುತ್ತಿತ್ತು. ಯಾವ ಮಾರ್ಗದಿಂದಲೂ ಅವರಿಗೆ ತಪ್ಪಿಸಿಕೊಳ್ಳಲು ಆಗಲಿಲ್ಲ. ಏಕೆಂದರೆ ಅರಣ್ಯದ ಕಡೆಗೆ ಓಡಿಹೋಗುತ್ತಿದ್ದ ಇಸ್ರಯೇಲರು ಹಿಂದಟ್ಟಿ ಬರುವವರ ಕಡೆಗೆ ತಿರುಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶಕ್ಕೆ ಏರಿಹೋಗುವದನ್ನು ಕಂಡು ಯಾವ ಮಾರ್ಗದಿಂದಲಾದರೂ ತಪ್ಪಿಸಿಕೊಳ್ಳಲಾರದವರಾದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:20
14 ತಿಳಿವುಗಳ ಹೋಲಿಕೆ  

ಇದಲ್ಲದೆ ಪರಲೋಕದಲ್ಲಿದ್ದ ಆ ಜನರು ಹೇಳಿದ್ದೇನೆಂದರೆ: “ಹಲ್ಲೆಲೂಯಾ! ಅವಳು ಸುಟ್ಟುಹೋಗುತ್ತಿದ್ದಾಳೆ. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಮೇಲೇಳುತ್ತಿರುವುದು.”


ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.


ಬೆಂಕಿಯು ಹಗಲಿರುಳು ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ಆ ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ಆ ದೇಶದೊಳಗೆ ಯಾರೂ ಪ್ರಯಾಣ ಮಾಡುವದಿಲ್ಲ.


ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.


ಅಡಗಿಕೊಂಡಿದ್ದ ಇಸ್ರೇಲಿನ ಜನರು ಇದನ್ನು ನೋಡಿ ಕೂಡಲೇ ತಾವು ಅಡಗಿದ್ದ ಸ್ಥಳದಿಂದ ಹೊರಬಂದು ವೇಗವಾಗಿ ಪಟ್ಟಣದ ಕಡೆಗೆ ಧಾವಿಸಿದರು. ಅವರು ಪಟ್ಟಣವನ್ನು ಪ್ರವೇಶಿಸಿ ಅದನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದರು.


ಯೆಹೋಶುವನು ಮತ್ತು ಅವನ ಜನರು, ತಮ್ಮ ಸೈನ್ಯವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡದ್ದನ್ನು ನೋಡಿದರು. ಅವರು ಪಟ್ಟಣದಿಂದ ಏಳುತ್ತಿರುವ ಹೊಗೆಯನ್ನು ನೋಡಿದರು. ಆಗ ಅವರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ” ಜನರೊಂದಿಗೆ ಹೋರಾಡಲು ಬಂದರು.


ಇಸ್ರೇಲರು ಅಡಗಿಕೊಂಡಿದ್ದ ಜನರಿಗೆ ಒಂದು ಸಂಕೇತ ಕೊಡಬೇಕೆಂದು ತಿಳಿಸಿದ್ದರು. ಅಡಗಿಕೊಂಡಿದ್ದವರು ಬೆಂಕಿಹಚ್ಚಿ ಆಕಾಶಕ್ಕೆ ಹೊಗೆ ಏರುವಂತೆ ಮಾಡುವುದೇ ಆ ಸಂಕೇತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು