Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:21 - ಪರಿಶುದ್ದ ಬೈಬಲ್‌

21 ಯೆಹೋಶುವನು ಮತ್ತು ಅವನ ಜನರು, ತಮ್ಮ ಸೈನ್ಯವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡದ್ದನ್ನು ನೋಡಿದರು. ಅವರು ಪಟ್ಟಣದಿಂದ ಏಳುತ್ತಿರುವ ಹೊಗೆಯನ್ನು ನೋಡಿದರು. ಆಗ ಅವರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ” ಜನರೊಂದಿಗೆ ಹೋರಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಗರವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ನೋಡಿದ ಯೆಹೋಶುವ ಹಾಗೂ ಇಸ್ರಯೇಲರು ಹಿಂದಿರುಗಿ ಆಯಿ ಜನರ ಮೇಲೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಆಯಿ ಎಂಬ ಊರಿನ ಜನರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಟ್ಟಣವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ಕಂಡಾಗ ಯೆಹೋಶುವನೂ ಇಸ್ರಾಯೇಲರೂ ಹಿಂದಿರುಗಿ ಆಯಿ ಎಂಬ ಪಟ್ಟಣದ ಜನರ ಮೇಲೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:21
4 ತಿಳಿವುಗಳ ಹೋಲಿಕೆ  

“ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.


ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು “ಆಯಿ”ಯ ಜನರ ಎರಡು ಕಡೆಗೂ ಇತ್ತು. “ಆಯಿ”ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.


ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ಆಯಿ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.


ಅಮ್ಮೋನಿಯರು ತಮ್ಮ ವಿರುದ್ಧವಾಗಿ ಹಿಂದೆ ಮತ್ತು ಮುಂದೆ ನಿಂತಿರುವುದನ್ನು ನೋಡಿದ ಯೋವಾಬನು ಇಸ್ರೇಲರಲ್ಲಿ ಶ್ರೇಷ್ಠರಾದವರನ್ನು ಆರಿಸಿಕೊಂಡು ಅರಾಮ್ಯರ ವಿರುದ್ಧ ಯುದ್ಧಮಾಡಲು ಅವರನ್ನು ಸಾಲಾಗಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು