Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:23 - ಪರಿಶುದ್ದ ಬೈಬಲ್‌

23 ಆದರೆ “ಆಯಿ”ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಯಿಯ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಯಿ ಎಂಬ ಪಟ್ಟಣದ ಅರಸನನ್ನು ಹಿಡಿದು ಜೀವದೊಡನೆ ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:23
7 ತಿಳಿವುಗಳ ಹೋಲಿಕೆ  

ಸೌಲನು ಅಮಾಲೇಕ್ಯರ ರಾಜನಾದ ಅಗಾಗನನ್ನು ಜೀವಸಹಿತ ಉಳಿಸಿದನು. ಆದರೆ ಉಳಿದ ಅಮಾಲೇಕ್ಯರನ್ನೆಲ್ಲ ಕೊಂದುಹಾಕಿದನು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಆ ಐದುಮಂದಿ ಅರಸರು ಆ ಗುಹೆಯಲ್ಲಿ ಅಡಗಿಕೊಂಡಿದ್ದನ್ನು ಯಾರೋ ನೋಡಿ ಯೆಹೋಶುವನಿಗೆ ತಿಳಿಸಿದರು.


ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು “ಆಯಿ”ಯ ಜನರ ಎರಡು ಕಡೆಗೂ ಇತ್ತು. “ಆಯಿ”ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.


ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು “ಆಯಿ”ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.


ಅನಂತರ ಯೆಹೋಶುವನು ಜನರಿಗೆ, “ಗುಹೆಯ ದ್ವಾರಕ್ಕೆ ಅಡ್ಡಲಾಗಿಟ್ಟ ಕಲ್ಲುಬಂಡೆಗಳನ್ನು ಸರಿಸಿ ಆ ಐದು ಮಂದಿ ಅರಸರನ್ನು ನನ್ನ ಹತ್ತಿರ ತನ್ನಿರಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು