Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:24 - ಪರಿಶುದ್ದ ಬೈಬಲ್‌

24 ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು “ಆಯಿ”ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲರು ತಮ್ಮನ್ನು ಅರಣ್ಯದವರೆಗೂ ಬೆನ್ನಟ್ಟಿ ಬಂದ ಆಯಿ ಜನರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರು ನಗರಕ್ಕೆ ಹೋಗಿ ಅಲ್ಲಿದ್ದವರನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿ ಮುಗಿಸಿಬಿಟ್ಟನಂತರ ಎಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:24
6 ತಿಳಿವುಗಳ ಹೋಲಿಕೆ  

ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ.


ಆದರೆ “ಆಯಿ”ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.


“ಆಯಿ”ಯ ಜನರೆಲ್ಲಾ ಆ ದಿನ ಸತ್ತುಹೋದರು. ಅಲ್ಲಿ ಹನ್ನೆರಡು ಸಾವಿರ ಗಂಡಸರು ಮತ್ತು ಹೆಂಗಸರು ಇದ್ದರು.


ಬೆನ್ಯಾಮೀನ್ಯರ ಸೈನಿಕರು ಇಸ್ರೇಲ್ ಸೈನಿಕರಿಂದ ತಪ್ಪಿಸಿಕೊಂಡು ಓಡತೊಡಗಿದರು. ಅವರು ಮರುಭೂಮಿಯ ಕಡೆಗೆ ಓಡಿದರು. ಆದರೆ ಯುದ್ಧದಿಂದ ತಪ್ಪಿಸಿಕೊಳ್ಳುವುದು ಅವರಿಂದ ಆಗಲಿಲ್ಲ. ನಗರಗಳಿಂದ ಇಸ್ರೇಲರು ಹೊರಬಂದು ಅವರನ್ನು ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು