Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:27 - ಪರಿಶುದ್ದ ಬೈಬಲ್‌

27 ಆ ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ಯೆಹೋಶುವನಿಗೆ ಆಜ್ಞಾಪಿಸಿದಂತೆಇಸ್ರಯೇಲರು ಆ ನಗರದಿಂದ ಪಶುಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಪಟ್ಟಣದೊಳಗಿಂದ ಪಶು ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇಲರು ಆ ಪಟ್ಟಣದ ಪಶುಪ್ರಾಣಿಗಳನ್ನೂ, ಕೊಳ್ಳೆಯನ್ನೂ ತಮಗೋಸ್ಕರ ಇಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:27
8 ತಿಳಿವುಗಳ ಹೋಲಿಕೆ  

ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.


ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.


ನನಗೆ ಆ ಪಶುಗಳ ಅಗತ್ಯವಿಲ್ಲ. ಕಾಡಿನಲ್ಲಿರುವ ಸರ್ವ ಮೃಗಗಳೂ ಗುಡ್ಡಗಳ ಮೇಲಿರುವ ಸಾವಿರಾರು ಪಶುಗಳೂ ನನ್ನವೇ.


ಹೀಗಾಗಿ ಈ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು.


“ನೀನೂ ಯಾಜಕನಾದ ಎಲ್ಲಾಜಾರನೂ ಸಮುದಾಯದ ಎಲ್ಲಾ ಕುಲಪ್ರಧಾನರೂ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು.


ಬೆಂಕಿಯನ್ನು ಸಹಿಸಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು.


ಅನಂತರ ಯೆಹೋಶುವನು “ಆಯಿ” ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.


ಆದರೆ ಅವರ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ನಾವು ಇಟ್ಟುಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು