Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:28 - ಪರಿಶುದ್ದ ಬೈಬಲ್‌

28 ಅನಂತರ ಯೆಹೋಶುವನು “ಆಯಿ” ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಯಾವ ಕಾಲಕ್ಕೂ ತಿರಿಗಿ ಕಟ್ಟಲ್ಪಡದಂತೆ ಹಾಳುದಿಬ್ಬವಾಗ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:28
11 ತಿಳಿವುಗಳ ಹೋಲಿಕೆ  

ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


“ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.


ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.


“ಆದರೆ ನೀನು ಕೇಳಿಲ್ಲವೇ? ನಾನು ಬಹುಕಾಲದ ಹಿಂದೆಯೇ ಅದನ್ನು ಯೋಜಿಸಿದ್ದೆನು. ಪುರಾತನ ಕಾಲದಿಂದಲೇ ಅದನ್ನು ಆಲೋಚಿಸಿದ್ದೆನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ನೀನು ಬಲಾಢ್ಯ ನಗರಗಳನ್ನು ಹಾಳುದಿಬ್ಬಗಳನ್ನಾಗಿ ಮಾಡಲು ಅವಕಾಶ ನೀಡಿದವನು ನಾನೇ.


(ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ಜೋರ್ಡನ್ ನದಿಯ ಮಧ್ಯದಲ್ಲಿ ಅಂದರೆ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುವಾಗ ಯಾಜಕರು ನಿಂತಿದ್ದ ಸ್ಥಳದಲ್ಲಿ ಇಟ್ಟನು. ಆ ಕಲ್ಲುಗಳು ಇಂದಿಗೂ ಆ ಸ್ಥಳದಲ್ಲಿವೆ.)


ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು