Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:30 - ಪರಿಶುದ್ದ ಬೈಬಲ್‌

30 ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರಿಗೆ ಆಜ್ಞಾಪಿಸಿದ್ದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಯಾವ ಕಬ್ಬಿಣವೂ ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ್ದಂತೆಯೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೂ ಯೆಹೋಶುವನು ಆ ಸಮಯದಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಉಳಿ ಮುಂತಾದವುಗಳನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:30
5 ತಿಳಿವುಗಳ ಹೋಲಿಕೆ  

“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು