Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:31 - ಪರಿಶುದ್ದ ಬೈಬಲ್‌

31 ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜನರು ಅದರ ಮೇಲೆ ಸರ್ವೇಶ್ವರನಿಗೆ ದಹನ ಹೋಮಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:31
16 ತಿಳಿವುಗಳ ಹೋಲಿಕೆ  

ಆಮೇಲೆ ಬೇರೆಬೇರೆ ಕುಲಗಳವರಿಗೆ ಸರ್ವಾಂಗಹೋಮವನ್ನರ್ಪಿಸಲು ಪಶುಗಳನ್ನು ಕೊಟ್ಟರು. ಈ ಸರ್ವಾಂಗಹೋಮವು ಮೋಶೆಯ ಕಟ್ಟಳೆಗನುಸಾರವಾಗಿ ನಡೆಯಿತು.


ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.


ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.


ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಸಮರ್ಪಿಸಿದನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.


ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?


ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.


ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಆರಿಸಿದರು.


ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕೆಂದರೆ ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು.


ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.


ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.


ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.


ನೀವು ಆ ಕಲ್ಲುಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು