Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:33 - ಪರಿಶುದ್ದ ಬೈಬಲ್‌

33 ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:33
22 ತಿಳಿವುಗಳ ಹೋಲಿಕೆ  

“ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು ನುಡಿಯಿರಿ.


ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.


ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆದಡದ ನೆಲವನ್ನು ಮುಟ್ಟಿದ ಕೂಡಲೇ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕಿಂತ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡಮೀರಿ ಹರಿಯಿತು.


“ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.


ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.


ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.”


ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.


ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.


ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ನಡೆದರು. ಜನರು ತಾವು ಪಾಳೆಯ ಮಾಡಿಕೊಂಡಿದ್ದ ಸ್ಥಳದಿಂದ ಹೊರಟು ಜೋರ್ಡನ್ ನದಿಯ ಕಡೆಗೆ ಹೋದರು.


“ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!”


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.


ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು