Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:34 - ಪರಿಶುದ್ದ ಬೈಬಲ್‌

34 ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಹಾಗು ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಶಾಪ ವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ತರುವಾಯ ಯೆಹೋಶುವನು ದೇವರ ನಿಯಮ ಗ್ರಂಥದಲ್ಲಿ ಬರೆದಿರುವ ಎಲ್ಲಾ ಮಾತುಗಳನ್ನೂ ಆಶೀರ್ವಾದಗಳನ್ನೂ, ಶಾಪಗಳನ್ನೂ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:34
10 ತಿಳಿವುಗಳ ಹೋಲಿಕೆ  

ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.


ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.


ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.


“ಲೇವಿಯರು ಗಟ್ಟಿಯಾದ ಸ್ವರದಲ್ಲಿ ಇಸ್ರೇಲರೆಲ್ಲರಿಗೆ ಹೀಗೆ ಹೇಳಬೇಕು:


ಯೆಹೋವನು ನಿಮ್ಮನ್ನು ದಿಗ್ಬ್ರಾಂತರನ್ನಾಗಿ ಮಾಡುವನು; ನಿಮ್ಮನ್ನು ಕುರುಡರನ್ನಾಗಿ ಮಾಡಿ ಗಲಿಬಿಲಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು