ಯೆಹೋಶುವ 8:4 - ಪರಿಶುದ್ದ ಬೈಬಲ್4 ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ - ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿಕೊಂಡಿರ್ರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ. ಅಧ್ಯಾಯವನ್ನು ನೋಡಿ |
ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೆದ್ದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾಡಬೇಕೆಂದಿರುವುದನ್ನು ನಾನು ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.