8 “ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.
8 ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.
ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.
ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ.
ಬಳಿಕ ಯೆಹೋಶುವನು ಅವರನ್ನು ಅವರು ಅಡಗಿಕೊಳ್ಳಬೇಕಾದ ಸ್ಥಳಕ್ಕೆ ಕಳುಹಿಸಿದನು. ಅವರು “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿದ್ದ ಒಂದು ಸ್ಥಳಕ್ಕೆ ಹೋದರು. ಇದು ಆಯಿಯ ಪಶ್ಚಿಮಕ್ಕಿತ್ತು. ಯೆಹೋಶುವನು ತನ್ನ ಜನರೊಂದಿಗೆ ಆ ರಾತ್ರಿ ಅಲ್ಲಿಯೇ ಇದ್ದನು.
ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು “ಆಯಿ”ಯ ಜನರ ಎರಡು ಕಡೆಗೂ ಇತ್ತು. “ಆಯಿ”ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.
ಯೆಹೋಶುವನು ತನ್ನ ಜನರನ್ನು ಯುದ್ಧಕ್ಕೆ ಸಿದ್ಧಗೊಳಿಸಿದ್ದನು. ಮುಖ್ಯ ಪಾಳೆಯವು ಪಟ್ಟಣದ ಉತ್ತರ ದಿಕ್ಕಿನಲ್ಲಿತ್ತು. ಉಳಿದ ಜನರು ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಆ ರಾತ್ರಿ ಯೆಹೋಶುವನು ಕಣಿವೆಗೆ ಹೋದನು.