ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.
ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.
ದಾವೀದನು ಯೆಹೋವನಿಗೆ, “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.
ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.
ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.
ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.
ನಮ್ಮ ದ್ರಾಕ್ಷಾರಸದ ಬುದ್ದಲಿಗಳನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಅವು ಹೊಸದಾಗಿದ್ದವು ಮತ್ತು ದ್ರಾಕ್ಷಾರಸದಿಂದ ತುಂಬಿದ್ದವು. ಆದರೆ ಈಗ ಹಳೆಯದಾಗಿ ಹರಿದುಹೋಗಿವೆ. ನಮ್ಮ ಬಟ್ಟೆಗಳನ್ನು ಮತ್ತು ಪಾದರಕ್ಷೆಗಳನ್ನು ನೋಡಿರಿ, ಈಗ ಅವು ದೂರ ಪ್ರಯಾಣದಿಂದ ಹಾಳಾಗಿಹೋಗಿವೆ” ಎಂದು ಹೇಳಿದರು.