15 ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.
15 ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.
(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.
ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ಆಯಿ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.