Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:17 - ಪರಿಶುದ್ದ ಬೈಬಲ್‌

17 ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೇಗಂದರೆ - ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಸೇರಿದಂಥ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳು ಅವರವೇ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:17
24 ತಿಳಿವುಗಳ ಹೋಲಿಕೆ  

ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743


ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಪಟ್ಟಣದವರು 743


ಆಗ ಪವಿತ್ರ ಗುಡಾರವು ಮತ್ತು ಯಜ್ಞವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿರುವಾಗ ಮೋಶೆಯು ಆ ಗುಡಾರವನ್ನು ಮಾಡಿಸಿದ್ದನು.


ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.


ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದಿಂದ ಆ ಸೀಮೆಯು ದಕ್ಷಿಣಕ್ಕೆ ತಿರುಗಿಕೊಂಡು ಆ ಬೆಟ್ಟದ ಪಶ್ಚಿಮಭಾಗದ ಜೊತೆಗೆ ಮುಂದುವರೆಯುತ್ತದೆ. ಆ ಸೀಮೆಯು ಕಿರ್ಯತ್ಯಾರೀಮ್ ಎಂಬ ಕಿರ್ಯತ್‌ಬಾಳ್‌ಗೆ ಹೋಗುತ್ತದೆ. ಈ ಪಟ್ಟಣವು ಯೆಹೂದ್ಯರಿಗೆ ಸೇರಿದ್ದು. ಇದು ಪಶ್ಚಿಮದಿಕ್ಕಿನ ಸೀಮೆಯಾಗಿತ್ತು.


ಯೆಹೂದದ ಜನರಿಗೆ ರಬ್ಬಾ ಮತ್ತು ಕಿರ್ಯತ್ಯಾರೀಮ್ ಎಂದು ಕರೆಯಲ್ಪಡುವ ಕಿರ್ಯತ್‌ಬಾಳ್ ಎಂಬ ಎರಡು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಸಹ ಕೊಡಲಾಯಿತು.


ಅಲ್ಲಿಂದ ಆ ಸೀಮೆಯು ನೆಫ್ತೋಹ ಬುಗ್ಗೆಗೆ ಹೋಗುತ್ತದೆ; ಅಲ್ಲಿಂದ ಎಫ್ರೋನ್ ಬೆಟ್ಟದ ಸಮೀಪದ ನಗರಗಳಿಗೆ ಹೋಗುತ್ತದೆ; ಅಲ್ಲಿಂದ ತಿರುಗಿ “ಬಾಲಾ” ಎಂಬ ಊರಿಗೆ ಹೋಗುತ್ತದೆ. (ಬಾಲಾವನ್ನು ಕಿರ್ಯತ್ಯಾರೀಮ್ ಎಂದೂ ಕರೆಯುತ್ತಾರೆ.)


ಆದ್ದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು.


ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು.


ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.


ಮೂರು ದಿನಗಳ ತರುವಾಯ ಆ ಜನರು ತಮ್ಮ ಪಾಳೆಯದ ಸಮೀಪ ವಾಸಿಸುವವರು ಎಂಬುದು ಇಸ್ರೇಲರಿಗೆ ತಿಳಿದುಬಂತು.


ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.


ದಕ್ಷಿಣದಿಕ್ಕಿನ ಮೇರೆಯು ಕಿರ್ಯತ್ಯಾರೀಮಿನ ಹತ್ತಿರದಿಂದ ಪ್ರಾರಂಭವಾಗಿ ನೆಪ್ತೋಹ ನದಿಯವರೆಗೆ ಹೋಗುತ್ತದೆ.


ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ “ದಾನ್ಯರ ಪಾಳೆಯ”ವೆಂಬ ಹೆಸರಿದೆ.


ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು.


ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.


ಇದು ಕಾಲೇಬನ ಸಂತತಿಯವರ ಪಟ್ಟಿ; ಕಾಲೇಬನ ಚೊಚ್ಚಲಮಗನು ಹೂರ. ಇವನು ಎಫ್ರಾತಳಿಗೆ ಹುಟ್ಟಿದವನು. ಹೂರನ ಗಂಡುಮಕ್ಕಳು ಯಾರೆಂದರೆ, ಕಿರ್ಯತ್ಯಾರೀಮ್ ಕಟ್ಟಿದವನಾದ ಶೋಬಾಲ್ ಮತ್ತು


ಶೋಬಾಲನು ಕಿರ್ಯತ್ಯಾರೀಮನ್ನು ಕಟ್ಟಿದನು. ಇದು ಶೋಬಾಲನ ಸಂತತಿಯವರ ಪಟ್ಟಿ: ಹಾರೋಯೆ ಮತ್ತು ಮಾನಹತಿ ಊರಿನ ಅರ್ಧಜನರು;


ಮತ್ತು ಕಿರ್ಯತ್ಯಾರೀಮಿನ ಕುಟುಂಬದವರು. ಇವರು ಯೆತೆರಿಯರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು. ಇವರಿಂದ ಚೊರ್ರಾತ್ಯರು ಮತ್ತು ಎಷ್ಟಾವೋಲ್ಯರು ಬಂದರು.


ಮೊದಲು ಯೆಹೋವನ ಸಂದೇಶವನ್ನು ಪ್ರವಾದಿಸುವ ಇನ್ನೊಬ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್‌ಯಾರೀಮ್ ಎಂಬ ಊರಿನವನು. ಈ ನಗರದ ಬಗ್ಗೆ ಮತ್ತು ಪ್ರದೇಶದ ಬಗ್ಗೆ ಯೆರೆಮೀಯನು ಪ್ರವಾದಿಸಿದ್ದನ್ನೇ ಊರೀಯನು ಪ್ರವಾದಿಸಿದ್ದನು.


ಗಿಬ್ಯೋನ್ ಊರಿನವನಾದ ಇಷ್ಮಾಯನು. (ಇವನು ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. ಅಲ್ಲದೆ ಅವರ ನಾಯಕನಾಗಿದ್ದನು.) ಯೆರೆಮೀಯ, ಯಹಜೀಯೇಲ್, ಯೋಹಾನಾನ್ ಮತ್ತು ಯೋಜಾಬಾದ್. ಇವರೆಲ್ಲಾ ಗೆದೆರಾಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು