ಯೆಹೋಶುವ 9:18 - ಪರಿಶುದ್ದ ಬೈಬಲ್18 ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸಮೂಹಪ್ರಧಾನರು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಹೊಡೆಯಲಿಲ್ಲ. ಆದರೆ ಸಮೂಹದವರೆಲ್ಲಾ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿ |