ಯೆಹೋಶುವ 9:19 - ಪರಿಶುದ್ದ ಬೈಬಲ್19 ಆದರೆ ಜನನಾಯಕರು, “ನಾವು ಮಾತುಕೊಟ್ಟಿದ್ದೇವೆ; ಇಸ್ರೇಲಿನ ದೇವರಾದ ಯೆಹೋವನ ಮುಂದೆ ಪ್ರಮಾಣ ಮಾಡಿದ್ದೇವೆ; ಈಗ ನಾವು ಅವರ ವಿರುದ್ಧ ಯುದ್ಧ ಮಾಡಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ನಾಯಕರೆಲ್ಲರು ಸಭೆಯ ಎಲ್ಲ ಸದಸ್ಯರಿಗೆ, “ನಾವು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಪ್ರಧಾನರೆಲ್ಲರೂ ಸರ್ವ ಸಮೂಹದವರಿಗೆ - ನಾವು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಅವರನ್ನು ಮುಟ್ಟುವದಕ್ಕಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಸಕಲ ಪ್ರಧಾನರು ಎಲ್ಲಾ ಜನರಿಗೆ, “ನಾವು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಅವರಿಗೆ ಪ್ರಮಾಣ ಮಾಡಿದ್ದೇವು. ಆದ್ದರಿಂದ ಅವರನ್ನು ನಾವು ಮುಟ್ಟಕೂಡದು. ಅಧ್ಯಾಯವನ್ನು ನೋಡಿ |