Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:27 - ಪರಿಶುದ್ದ ಬೈಬಲ್‌

27 ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:27
9 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.


ಹೀಗೆ ಗಿಬ್ಯೋನಿನ ಜನರು ಗುಲಾಮರಾದರು. ಆದರೆ ಯೆಹೋಶುವನು ಅವರನ್ನು ಜೀವಂತವಾಗಿ ಉಳಿಸಿದನು. ಇಸ್ರೇಲರು ಅವರನ್ನು ಕೊಲ್ಲದಂತೆ ನೋಡಿಕೊಂಡರು.


ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು


ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.


ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು