Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:5 - ಪರಿಶುದ್ದ ಬೈಬಲ್‌

5 ಅವರು ಹಳೆಯ ಪಾದರಕ್ಷೆಗಳನ್ನು ಮೆಟ್ಟಿಕೊಂಡರು; ಹಳೆಯ ಬಟ್ಟೆಗಳನ್ನು ಧರಿಸಿಕೊಂಡರು; ಒಣಗಿದ ಮತ್ತು ಕೆಟ್ಟುಹೋದ ರೊಟ್ಟಿಗಳನ್ನು ಕಟ್ಟಿಕೊಂಡರು. ಹೀಗೆ ಅವರು ಬಹುದೂರ ಪ್ರಯಾಣಮಾಡಿ ಬಂದವರಂತೆ ತೋರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿ ಹರಿದ ಹಳೆಯ ಕೆರಗಳನ್ನು ಮೆಟ್ಟಿ ಹಳೆಯ ಬಟ್ಟೆಗಳನ್ನು ಹೊದೆದು ಒಣರೊಟ್ಟೀ ಚೂರುಗಳನ್ನು ಬುತ್ತೀ ಕಟ್ಟಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತೇಪೆ ಹಾಕಿದ ಹಳೆಯದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು ಹಳೆಯ ಬಟ್ಟೆಗಳನ್ನು ತೊಟ್ಟುಕೊಂಡು, ಒಣಗಿ ಬೂಷ್ಟು ಹಿಡಿದ ರೊಟ್ಟಿಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:5
7 ತಿಳಿವುಗಳ ಹೋಲಿಕೆ  

“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ನಮ್ಮ ದ್ರಾಕ್ಷಾರಸದ ಬುದ್ದಲಿಗಳನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಅವು ಹೊಸದಾಗಿದ್ದವು ಮತ್ತು ದ್ರಾಕ್ಷಾರಸದಿಂದ ತುಂಬಿದ್ದವು. ಆದರೆ ಈಗ ಹಳೆಯದಾಗಿ ಹರಿದುಹೋಗಿವೆ. ನಮ್ಮ ಬಟ್ಟೆಗಳನ್ನು ಮತ್ತು ಪಾದರಕ್ಷೆಗಳನ್ನು ನೋಡಿರಿ, ಈಗ ಅವು ದೂರ ಪ್ರಯಾಣದಿಂದ ಹಾಳಾಗಿಹೋಗಿವೆ” ಎಂದು ಹೇಳಿದರು.


ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”


ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಮೈಮೇಲಿದ್ದ ಬಟ್ಟೆಗಳು ಹರಿದುಹೋಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.


ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು.


ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.


“ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು