Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:8 - ಪರಿಶುದ್ದ ಬೈಬಲ್‌

8 ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು. ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆಹೋಶುವನಿಗೆ - ನಾವು ನಿನ್ನ ದಾಸರಾಗಿದ್ದೇವೆನ್ನಲು ಅವನು ಅವರನ್ನು - ನೀವು ಯಾರು, ಎಲ್ಲಿಯವರು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:8
9 ತಿಳಿವುಗಳ ಹೋಲಿಕೆ  

ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಈ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇವೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”


ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.


ಆದ್ದರಿಂದ ನಮ್ಮ ಹಿರಿಯರು ಮತ್ತು ನಮ್ಮ ಜನರು ನಮಗೆ, ‘ನಿಮ್ಮ ಪ್ರಯಾಣಕ್ಕೆ ಸಾಕಷ್ಟು ಆಹಾರವನ್ನು ತೆಗೆದುಕೊಂಡು ಹೋಗಿ ಇಸ್ರೇಲರನ್ನು ಭೇಟಿಮಾಡಿ, ನಾವು ನಿಮ್ಮ ಸೇವಕರು. ನಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಿರಿ ಎಂದು ಅವರಿಗೆ ತಿಳಿಸಿ’ ಎಂಬುದಾಗಿ ಹೇಳಿ ನಮ್ಮನ್ನು ಕಳುಹಿಸಿದ್ದಾರೆ.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.


ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.


ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು