ಯೆಹೋಶುವ 9:9 - ಪರಿಶುದ್ದ ಬೈಬಲ್9 ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದಕ್ಕೆ ಅವರು - ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮಮಹತ್ತಿನ ನಿವಿುತ್ತ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಆತನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.