ಯೋನನು 1:10 - ಪರಿಶುದ್ದ ಬೈಬಲ್10 ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವನು ಯೆಹೋವನ ಸನ್ನಿಧಿಯಿಂದ ಓಡಿಬಂದವನು ಎಂಬದನ್ನು ಅವನು ಮೊದಲು ಹೇಳಿದ ಒಂದು ಮಾತಿನಿಂದ ಆ ಜನರು ತಿಳುಕೊಂಡಿದ್ದರು. ಈಗ ಇದನ್ನೂ ಕೇಳಿ ಬಹಳವಾಗಿ ಹೆದರಿ - ಇದೇನು ನೀನು ಮಾಡಿದ್ದು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು. ಅಧ್ಯಾಯವನ್ನು ನೋಡಿ |