ಯೋನನು 1:16 - ಪರಿಶುದ್ದ ಬೈಬಲ್16 ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು; ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳ ಭಯಪಟ್ಟು ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು. ಅಧ್ಯಾಯವನ್ನು ನೋಡಿ |
ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ!
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.